ಹಾವೇರಿ: ನಾನು ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಸಮುದಾಯದವರ ಆಸೆ: ಶಾಸಕ ನೆಹರು ಓಲೇಕಾರ್ - kannada news paper
ನಾನು ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ ಬಿ ಎಸ್ ಯಡಿಯೂರಪ್ಪನವರ ನಿರ್ಧಾರಕ್ಕೆ ಬದ್ದನಾಗಿದ್ದೇನೆ ಆದ್ರೆ ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.
ಶಾಸಕ ನೆಹರು ಓಲೇಕಾರ್
ನಗರದಲ್ಲಿ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಲಗೈ ಸಮುದಾಯಕ್ಕೆ ಕಳೆದ ಬಾರಿ ಪ್ರಾತಿನಿಧ್ಯ ಸಿಕ್ಕಿಲ್ಲ, ಈ ಬಾರಿಯಾದರು ಈ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬಹುದು ಎಂಬ ವಿಶ್ವಾಸವನ್ನ ನೆಹರು ಓಲೇಕಾರ್ ವ್ಯಕ್ತಪಡಿಸಿದರು.
ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುವೇ ಸಿಗದಿದ್ದರೂ ತೊಂದರೆಯಿಲ್ಲಾ. ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆ ಸಾಕಷ್ಟು ಜಟಿಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೊ ಅದಕ್ಕೆ ತಾನು ಬದ್ದನಾಗಿದ್ದೇನೆ ಎಂದು ಓಲೇಕಾರ್ ತಿಳಿಸಿದರು.