ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಇಂದು 18 ಕೊರೊನಾ ಕೇಸ್​ ಪತ್ತೆ: 230ಕ್ಕೆ ಏರಿದ ಸೋಂಕಿತರ ಸಂಖ್ಯೆ - ಹಾವೇರಿಯಲ್ಲಿ 18 ಕೊರೊನಾ ದೃಢ

ಹಾವೇರಿ ತಾಲೂಕಿನಲ್ಲಿ 8, ರಾಣೆಬೆನ್ನೂರು ತಾಲೂಕಿನಲ್ಲಿ 5, ಶಿಗ್ಗಾಂವಿ ಮತ್ತು ಹಾನಗಲ್ ತಾಲೂಕಿನಲ್ಲಿ ತಲಾ ಇಬ್ಬರಿಗೆ, ಬ್ಯಾಡಗಿಯಲ್ಲಿ ಒಬ್ಬರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

haveri
ಹಾವೇರಿ

By

Published : Jul 9, 2020, 10:15 PM IST

ಹಾವೇರಿ: ಜಿಲ್ಲೆಯಲ್ಲಿ ಗುರುವಾರ 18 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 230ಕ್ಕೆ ಏರಿದಂತಾಗಿದೆ.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಹಾವೇರಿ ತಾಲೂಕಿನಲ್ಲಿ 8, ರಾಣೆಬೆನ್ನೂರು ತಾಲೂಕಿನಲ್ಲಿ 5, ಶಿಗ್ಗಾಂವಿ ಮತ್ತು ಹಾನಗಲ್ ತಾಲೂಕಿನಲ್ಲಿ ತಲಾ ಇಬ್ಬರಿಗೆ, ಬ್ಯಾಡಗಿಯಲ್ಲಿ ಒಬ್ಬರಿಗೆ ಕೊರೊನಾ ಇರುವುದು ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿನ ಓರ್ವ ನರ್ಸ್ ಸೇರಿದಂತೆ ಮೂವರು ನರ್ಸ್​ಗಳಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಓರ್ವ ಸರ್ಕಾರಿ ವೈದ್ಯ ಹಾಗೂ ಓರ್ವ ಎಂಆರ್ ಮತ್ತು ಇಬ್ಬರು ಕಾನ್ಸ್‌ಟೇಬಲ್‌ಗೆ ಕೊರೊನಾ ವಕ್ಕರಿಸಿದೆ.

117 ಜನ ಗುಣಮುಖರಾಗಿ ಮನೆ ಸೇರಿದ್ದರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 111 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಿಮ್ಸ್‌ಗೆ ದಾಖಲಾಗಿದ್ದ ಓರ್ವ ಶಿಗ್ಗಾಂವಿಯ ಸೋಂಕಿತ ಮೃತಪಟ್ಟಿದ್ದು, ಸರ್ಕಾರದ ನಿಯಮಾವಳಿಗಳ ಪ್ರಕಾರ ಅವರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ABOUT THE AUTHOR

...view details