ಹಾವೇರಿ: ನಿಜಸುಖಿ ಶರಣ ಹಡಪದ ಅಪ್ಪಣ್ಣರ ಜಿಲ್ಲಾಮಟ್ಟದ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಪ್ಪಣ್ಣ ಸಂಸ್ಥಾನ ಮಠದ ಅನ್ನದಾನ ಭಾರತಿ ಮಹಾಸ್ವಾಮಿಗಳು ಪಾಲ್ಗೊಂಡಿದ್ದರು.
ಹಾವೇರಿಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ.. - Nijasukhi Sharana hadapada Appanna Jayanti
ಹಾವೇರಿಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣರ ಜಿಲ್ಲಾಮಟ್ಟದ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
![ಹಾವೇರಿಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ..](https://etvbharatimages.akamaized.net/etvbharat/prod-images/768-512-3987097-thumbnail-3x2-jayanti.jpg)
ಹಾವೇರಿಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣ ಜಯಂತಿ
ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಜಯಂತಿ ಅಂಗವಾಗಿ ಶರಣ ಹಡಪದ ಅಪ್ಪಣ್ಣ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಹಾವೇರಿಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣ ಜಯಂತಿ..
ಮೆರವಣಿಗೆಯಲ್ಲಿ ಅಪ್ಪಣ್ಣ ಸಂಸ್ಥಾನ ಮಠದ ಅನ್ನದಾನ ಭಾರತಿ ಮಹಾಸ್ವಾಮಿಗಳು ಪಾಲ್ಗೊಂಡಿದ್ದರು. ಮೆರವಣಿಗೆಯುದ್ದಕ್ಕೂ ಪುರವಂತಿಕೆ, ಜಾಂಜ್ ಮೇಳ ಸೇರಿದಂತೆ ವಿವಿಧ ಕಲಾತಂಡಗಳ ಕಲಾ ಪ್ರದರ್ಶನ ಗಮನ ಸೆಳೆಯಿತು. ನಂತರ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಸಾನಿಧ್ಯವಹಿಸಿದ್ದರು.