ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಕೊರೊನಾ ಆತಂಕವಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ - corona virus case
ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣಗಳು ಕಂಡುಬಂದಿಲ್ಲ. ವೈದ್ಯಕೀಯ ಪರೀಕ್ಷೆಯ ವೇಳೆ ಶಂಕಿತ ಪ್ರಕರಣಗಳು ನೆಗೆಟಿವ್ ರಿಪೋರ್ಟ್ ಬಂದಿದೆಯೆಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟಪಡಿಸಿದ್ದಾರೆ.
![ಹಾವೇರಿಯಲ್ಲಿ ಕೊರೊನಾ ಆತಂಕವಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ No Corona case in Haveri: DC](https://etvbharatimages.akamaized.net/etvbharat/prod-images/768-512-6461120-thumbnail-3x2-haveri.jpg)
ಹಾವೇರಿಯಲ್ಲಿಲ್ಲ ಕೊರೊನಾ ಪ್ರಕರಣ: ಡಿಸಿ ಸ್ಪಷ್ಟನೆ
ಹಾವೇರಿಯಲ್ಲಿಲ್ಲ ಕೊರೊನಾ ಪ್ರಕರಣ: ಡಿಸಿ ಸ್ಪಷ್ಟನೆ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರಣಾಂತರಗಳಿಂದ ವಿದೇಶಕ್ಕೆ ತೆರಳಿದ್ದ ಜನ್ರು ವಾಪಸ್ಸಾಗುತ್ತಿದ್ದಾರೆ. ಈಗಾಗಲೇ ವಿದೇಶದಿಂದ ಜಿಲ್ಲೆಗೆ ಬಂದ ನೂರಕ್ಕೂ ಅಧಿಕ ಜನರ ತಪಾಸಣೆ ನಡೆಸಲಾಗಿದ್ದು, ಅವರಿಗೆ ಮನೆಯಲ್ಲಿಯೇ ಇರುವಂತೆ ತಿಳಿಸಲಾಗಿದೆ. ಅವರು ವಾಸಿಸುತ್ತಿರುವ ಸ್ಥಳಗಳಿಗೆ ತೆರಳಿ ವೈದ್ಯರೇ ತಪಾಸಣೆ ನಡೆಸಿ ಬರುತ್ತಿದ್ದಾರೆ ಎಂದರು.
ಜಿಲ್ಲೆಯಿಂದ ವಿದೇಶಕ್ಕೆ ತೆರಳಿದವರ ಬಗ್ಗೆ ಅವರ ಸಂಬಂಧಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಈ ವೇಳೆ ತಿಳಿಸಿದರು. ಜನರು ಹೆದರುವ ಅವಶ್ಯಕತೆ ಇಲ್ಲ, ಆದರೆ ಮುಂಜಾಗ್ರತೆಯಿಂದ ಇರುವಂತೆ ಡಿಸಿ ಸಲಹೆ ನೀಡಿದರು.