ಬೆಳಗಾವಿ/ಹಾವೇರಿ:ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾರಿಗೆ ನೌಕರರ ಮುಷ್ಕರ: ಸಚಿವ ಸವದಿ ತವರೂರಲ್ಲಿ ತಟ್ಟದ ಪ್ರತಿಭಟನೆಯ ಬಿಸಿ
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಎಂದು ಆಗ್ರಹಿಸಿ ಸಾರಿಗೆ ಇಲಾಖೆ ಸಿಬ್ಬಂದಿ ಕರೆ ನೀಡಿರುವ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಒಂದೆಡೆ ಹೋರಾಟ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಎಂದಿನಂತೆ ಬಸ್ಗಳು ರೋಡಿಗಿಳಿದಿವೆ.
ಸಾರಿಗೆ ನೌಕರರ ಮುಷ್ಕರದ ಬಿಸಿ
ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆದ್ರೆ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರ ತವರು ಜಿಲ್ಲೆಯಲ್ಲಿ ಮಷ್ಕರದ ಬಿಸಿ ತಟ್ಟಿಲ್ಲ. ಎಂದಿನಂತೆ ಬಸ್ಗಳು ಕಾರ್ಯಾಚರಣೆಗೆ ಇಳಿದಿವೆ.
ಹಾವೇರಿ ಜಿಲ್ಲೆಯಲ್ಲೂ ಸಹ ಎಂದಿನಂತೆ ಸಾರಿಗೆ ಬಸ್ಗಳು ಸಂಚರಿಸುತ್ತಿವೆ. ಹಾವೇರಿ ಡಿಪೋದಿಂದ ಬಸ್ಗಳು ವಿವಿಧೆಡೆ ಸಂಚಾರ ಆರಂಭಿಸಿವೆ. ಹಾವೇರಿಯಿಂದ ಹುಬ್ಬಳ್ಳಿ, ಗದಗ ಸೇರಿದಂತೆ ಗ್ರಾಮೀಣ ಭಾಗಗಳಿಗೆ ಬಸ್ಗಳು ತೆರಳುತ್ತಿವೆ.
Last Updated : Dec 11, 2020, 10:47 AM IST