ರಾಣೆಬೆನ್ನೂರ: ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಹೊಟೆಲ್, ಬೇಕರಿ, ಸ್ಟೇಷನರಿ ಅಂಗಡಿಗಳ ಮೇಲೆ ತಹಶೀಲ್ದಾರ್, ನಗರಸಭೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪ್ಲಾಸ್ಟಿಕ್ ನಿರ್ಮಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಣೆಬೆನ್ನೂರ: ಹೋಟೆಲ್, ಬೇಕರಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ
ರಾಣೆಬೆನ್ನೂರಿನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಹೊಟೆಲ್, ಬೇಕರಿ, ಸ್ಟೇಷನರಿ ಅಂಗಡಿಗಳ ಮೇಲೆ ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಲಾಯಿತು.
ಸುಮಾರು 15 ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ದಾಳಿ ವೇಳೆ ಆಹಾರ ಪರವಾನಗಿ, ವಾಣಿಜ್ಯ ಪರವಾನಗಿ, ಆಹಾರ ಗುಣಮಟ್ಟದ ಜೊತೆಗೆ ಪ್ಲಾಸ್ಟಿಕ್ ಬಳಕೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಸಮಯದಲ್ಲಿ ನ್ಯೂನತೆಗಳು ಕಂಡ ಬಂದ ಹೋಟೆಲ್ ಹಾಗೂ ಬೇಕರಿ ಮಾಲೀಕರಿಗೆ 15 ದಿನಗಳಲ್ಲಿ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ನೋಟಿಸ್ ಜಾರಿ ಮಾಡಲಾಯಿತು.
ಇನ್ನು ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ಮತ್ತು ಪ್ಲಾಸ್ಟಿಕ್ ಬಳಕೆ ಕಂಡು ಬಂದ ಅಂಗಡಿ ಮಾಲೀಕರಿಗೆ 3,900 ರೂ. ದಂಡ ವಿಧಿಸಲಾಯಿತು. ನಂತರ ಪ್ಲಾಸ್ಟಿಕ್ ಕೈ ಚೀಲಗಳನ್ನು ವಶಪಡಿಸಿಕೊಂಡು ಮುಂದೆ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು.