ರಾಣೆಬೆನ್ನೂರ : ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು
ರಾಣೆಬೆನ್ನೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3 ಕ್ವಿಂಟಲ್ 96 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಅಕ್ಕಿ ಕೂಡಿಡಲಾಗಿದೆ ಎಂಬ ಮಾಹಿತಿ ಮೇರೆಗೆ ತಹಶೀಲ್ದಾರ್ ಬಸನಗೌಡ ಕೊಟೂರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಮನೆಯಲ್ಲಿ ಸುಮಾರು 9 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 3 ಕ್ವಿಂಟಲ್ 96 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಆಹಾರ ಇಲಾಖೆಯ ಅಧಿಕಾರಿಗಳು ಆ ಪಡಿತರ ಅಕ್ಕಿಯನ್ನು ಸರ್ಕಾರದ ಗೋದಾಮಿಗೆ ಸಾಗಿಸಿದ್ದಾರೆ. ಅಲ್ಲದೇ ಸಂಗ್ರಹಿಸಿಟ್ಟ ವ್ಯಕ್ತಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.