ಹಾನಗಲ್: ಬೆಳೆ ವಿಮೆ ಕುರಿತು ರೈತರಿಗಿರುವ ಗೊಂದಲಗಳ ಬಗ್ಗೆ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ರೈತರು ಮತ್ತು ಅಧಿಕಾರಿಗಳ ಸಭೆ ನಡೆಸಲಾಯಿತು.
ಹಾನಗಲ್: ಬೆಳೆ ವಿಮೆ ಕುರಿತು ರೈತರಿಗೆ ಮಾಹಿತಿ ನೀಡಿದ ಅಧಿಕಾರಿಗಳು - Horticulture Department latest news
ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ಅಧೀನದಲ್ಲಿ ಬರುವ ಬೆಳೆ ವಿಮೆ ಕುರಿತು ಇರುವ ಗೊಂದಲಗಳ ಬಗ್ಗೆ ರೈತರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
Farmers meeting
ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ಅಧೀನದಲ್ಲಿ ಬರುವ ಬೆಳೆ ವಿಮೆ ಬಗ್ಗೆ ಚರ್ಚಿಸಿದ ರೈತರು, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. ಜೊತೆಗೆ ತಾಂತ್ರಿಕ ದೋಷದ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ಪರಪ್ಪನವರ, ರುದ್ರಪ್ಪ ಹಣ್ಣಿ ಮತ್ತು ಅಧಿಕಾರಿಗಳಾದ ತಹಶೀಲ್ದಾರ್ ಪಿ.ಎಸ್.ಎರಿಸ್ವಾಮಿ, ಕೃಷಿ ಅಧಿಕಾರಿ ದೇವೆಂದ್ರಪ್ಪ ಮುಂತಾದವರಿದ್ದರು.