ಕರ್ನಾಟಕ

karnataka

ETV Bharat / state

ಹಾವೇರಿ: ಮನೆ ಗೋಡೆ ಕುಸಿದು ಬಿದ್ದು ವೃದ್ಧ ಸಾವು - Old man died news

ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ವೃದ್ಧ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.

Old man died after house wall collapses in haveri
ಮನೆ ಗೋಡೆ ಕುಸಿದು ಬಿದ್ದು ವೃದ್ಧ ಸಾವು

By

Published : Oct 18, 2022, 12:29 PM IST

ಹಾವೇರಿ:ಮನೆ ಗೋಡೆ ಕುಸಿದು ಬಿದ್ದ ಹಿನ್ನೆಲೆ ವೃದ್ಧ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ ಹರಿಜನ (68) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ.

ಮನೆ ಗೋಡೆ ಕುಸಿದು ಬಿದ್ದು ವೃದ್ಧ ಸಾವು

ಮಳೆಗೆ ಗೋಡೆ ನೆನೆದಿದ್ದ ಪರಿಣಾಮ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಮನೆ ಕುಸಿದು ಬಿದ್ದಾಗ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಹನುಮಂತಪ್ಪ ಜೊತೆಯಲ್ಲಿ ಮನೆಯಲ್ಲಿದ್ದ ನಾಲ್ಕೈದು ಜನರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಾಯಚೂರಲ್ಲಿ ನಿರಂತರ ಮಳೆ: ಮನೆ ಕುಸಿದು ಬಿದ್ದು ವೃದ್ಧ ಸಾವು

ABOUT THE AUTHOR

...view details