ಹಾನಗಲ್: ತಾಲೂಕಿನ ಬಾಳಂಬೀಡ ಗ್ರಾಮದ ಬಳಿ ಬೈಕ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರೊಂದು ಪಲ್ಟಿಯಾಗಿದೆ.
ಹಾನಗಲ್: ಹೆದ್ದಾರಿಯಲ್ಲಿ ಅಡ್ಡ ಬಂದ ಬೈಕ್ ಸವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ - Hanagal Road Accident
ಶಿರಶಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಓಮಿನಿ ಕಾರಿಗೆ ಅಡ್ಡಲಾಗಿ ಬೈಕ್ ಸವಾರ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಅದೃಷ್ಟವಶಾತ್ ಕಾರಿನಲ್ಲಿದ್ದ 5 ಜನರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಪ್ರಶಾಂತ ಭಟ್ ಎಂಬುವರು ಶಿರಶಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಒಮಿನಿ ಕಾರಿಗೆ ಬಾಳಂಬೀಡ ಒಳ ರಸ್ತೆಯಿಂದ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ವೇಳೆ ಅಪಘಾತ ತಪ್ಪಿಸಲು ಹೋದ ಚಾಲಕ ನಿಯಂತ್ರಣ ತಪ್ಪಿ ಕಾರನ್ನು ಪಲ್ಟಿ ಮಾಡಿದ್ದಾನೆ ಎನ್ನಲಾಗಿದೆ.
ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಡೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.