ರಾಣೆಬೆನ್ನೂರು: ಬೈಕ್ ಸ್ಕಿಡ್ ಆಗಿ ಬಿದ್ದು, ಯುವಕನೋರ್ವ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ನಡೆದಿದೆ.
ರಾಣೆಬೆನ್ನೂರಿನಲ್ಲಿ ಬೈಕ್ ಅಪಘಾತ: ಯುವಕ ಸಾವು - Ranebennuru haveri latest news
ಅಣ್ಣಪ್ಪ ಮತ್ತು ಆತನ ಗೆಳೆಯ ಬೈಕ್ ನಲ್ಲಿ ಹೋಗುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಕ್ಷಣ ಸವಾರನನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಇನ್ನೂ ಹಿಂಬದಿ ಕುಳಿತ ಗೆಳೆಯ ಮತ್ತು ಪಾದಚಾರಿಗೆ ಗಂಭೀರ ಗಾಯಗಳಾಗಿವೆ.

Bike accident
ಗ್ರಾಮದ ಅಣ್ಣಪ್ಪ ದಿಳ್ಳೇಪ್ಪ ಬಾರ್ಕಿ(22) ಮೃತ ಯುವಕ. ಅಣ್ಣಪ್ಪ ಮತ್ತು ಆತನ ಗೆಳೆಯ ಬೈಕ್ ನಲ್ಲಿ ಹೋಗುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ತಕ್ಷಣ ಸವಾರನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟಿದ್ದಾನೆ.
ಈ ಘಟನೆಯಲ್ಲಿ ಪಾದಚಾರಿಗೆ ಮತ್ತು ಬೈಕ್ ಹಿಂಬದಿ ಕುಳಿತವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಣೆಬೆನ್ನೂರ ಗ್ರಾಮೀಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.