ಹಾವೇರಿ:ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಮಕ್ಕಳ ಮೃತದೇಹಗಳನ್ನು ಉಪ್ಪಿನ ರಾಶಿಯಲ್ಲಿ ನಾಲ್ಕೈದು ಗಂಟೆಗಳ ಕಾಲ ಇಟ್ಟರೆ ಮತ್ತೆ ಬದುಕಿ ಬರುತ್ತಾರೆ ಎಂಬ ವಿಡಿಯೋವೊಂದು ಹಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನೇ ನಿಜವೆಂದು ತಿಳಿದು ಇತ್ತೀಚಿಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಬಾಲಕರ ಮೃತದೇಹಗಳನ್ನು ಪೋಷಕರು ಉಪ್ಪಿನ ರಾಶಿಯಲ್ಲಿಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ನಡೆದಿದೆ.
ಗಾಳಪೂಜಿ ಗ್ರಾಮದಲ್ಲಿ ಭಾನುವಾರ ಕೆರೆಗೆ ಈಜಲು ತೆರಳಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಹೇಮಂತ್ (12) ಮತ್ತು ನಾಗರಾಜ್ (11) ಮೃತಪಟ್ಟವರು. ಇವರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯುತ್ತಿದ್ದಂತೆ ಪೋಷಕರು ಶವಗಳನ್ನು ಉಪ್ಪಿನ ರಾಶಿಯಲ್ಲಿ ಆರು ಗಂಟೆಗಳ ಕಾಲ ಇಟ್ಟಿದ್ದಾರೆ.