ಕರ್ನಾಟಕ

karnataka

ETV Bharat / state

ಮನೆಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿರುವ ರೋಗಿಗಳು - ಮನೆಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿರುವ ರೋಗಿಗಳು

ದೂರದ ಊರುಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬರುವ ರೋಗಿಗಳು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಡಿಚ್ಚಾರ್ಜ್ ಆದ ನಂತರ ಮನೆಗೆ ತೆರಳಲು ಕಷ್ಟ ಪಡುತ್ತಿದ್ದಾರೆ. 108 ಗೆ ಪೊನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ.

Haveri hospital
ಹಾವೇರಿ ಜಿಲ್ಲಾಸ್ಪತ್ರೆ

By

Published : Apr 4, 2020, 9:05 PM IST

ಹಾವೇರಿ:ಕೊರೊನಾ ಭೀತಿಯಿಂದ ದೇಶವೇ ಲಾಕ್​ ಡೌನ್​ ಆಗಿದ್ದು ಸಾರಿಗೆ ವ್ಯವಸ್ಥೆ ಕೂಡಾ ಬಂದ್ ಆಗಿರುವುದು ತಿಳಿದ ವಿಚಾರ. ಆದರೆ ಇದರಿಂದ ಸಾಕಷ್ಟು ಜನ ಸಮಸ್ಯೆ ಎದುರಿಸುತ್ತಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಚಿಕಿತ್ಸೆ ಪಡೆದ ನಂತರ ಮನೆಗೆ ತೆರಳಲು ವಾಹನಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹಾವೇರಿ ಜಿಲ್ಲಾಸ್ಪತ್ರೆ

ದೂರದ ಊರುಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬರುವ ರೋಗಿಗಳು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಡಿಚ್ಚಾರ್ಜ್ ಆದ ನಂತರ ಮನೆಗೆ ತೆರಳಲು ಕಷ್ಟ ಪಡುತ್ತಿದ್ದಾರೆ. 108 ಗೆ ಪೊನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಇನ್ನು ಖಾಸಗಿಯವರನ್ನು ಕೇಳಿದರೆ ದುಪ್ಪಟ್ಟು ಹಣ ಕೇಳುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದಾರೆ. ಅದರಲ್ಲೂ ಗರ್ಭಿಣಿ ಮಹಿಳೆಯರು, ಬಾಣಂತಿಯರು ಪಡಬಾರದ ಕಷ್ಟ ಪಡುತ್ತಿದ್ದು ಜಿಲ್ಲಾಡಳಿತ ಇತ್ತ ಕಡೆ ಗಮನಹರಿಸಬೇಕಿದೆ. ಜಿಲ್ಲಾಕೇಂದ್ರದಿಂದ ದೂರದ ಊರುಗಳಿಗೆ ತೆರಳುವ ರೋಗಿಗಳಿಗೆ ವಾಹನದ ವ್ಯವಸ್ಥೆ ಕಲ್ಪಿಸಬೇಕಿದೆ.

For All Latest Updates

TAGGED:

ABOUT THE AUTHOR

...view details