ಹಾವೇರಿ: ಮಾದಕ ವಸ್ತು ತಡೆ, ಕೋವಿಡ್ ಜಾಗೃತಿ ಹೆಲ್ಪ್ಲೈನ್ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ನಗರದಲ್ಲಿಂದು ಜಾಥಾ ನಡೆಸಿತು.
ಮಾದಕ ವಸ್ತು ತಡೆ, ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರ ಜಾಥಾ - drug trafficking
ಜಾಥಾದಲ್ಲಿ ಪಾಲ್ಗೊಂಡ ಪೊಲೀಸ್ ಸಿಬ್ಬಂದಿ, ಮಾದಕವಸ್ತು ಹಾವಳಿ ತಡೆಯುವ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಪೊಲೀಸರ ಜಾಥಾ
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹಾವೇರಿ ಎಸ್ಪಿ ದೇವರಾಜ್ ಜಾಥಾಗೆ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ಪಾಲ್ಗೊಂಡ ಪೊಲೀಸ್ ಸಿಬ್ಬಂದಿ ಮಾದಕವಸ್ತು ಹಾವಳಿ ತಡೆಯುವ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಇದೆ ವೇಳೆ ಜಿಲ್ಲೆಯಲ್ಲಿ ಕೋವಿಡ್ ಕುರಿತಂತೆ ಮಾಹಿತಿ ಪಡೆಯಲು ಹೆಲ್ಪ್ಲೈನ್ ಉದ್ಘಾಟನೆ ಮಾಡಲಾಯಿತು. ಜಿಲ್ಲೆಯ ಜನ 112 ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಜಾಗೃತಿ ಮೂಡಿಸಿದರು.