ಕರ್ನಾಟಕ

karnataka

ETV Bharat / state

ಸಾಮೂಹಿಕ ವಿವಾಹದಲ್ಲಿ ಮತದಾನ ಜಾಗೃತಿ ಮೂಡಿಸಿದ ಚುನಾವಣಾಧಿಕಾರಿಗಳು - undefined

ಈ ಬಾರಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾಧಿಕಾರಿಗಳು ಪ್ರಯತ್ನ ನಡೆಸುತ್ತಿದ್ದಾರೆ. ಹಾವೇರಿಯ ಚುನಾವಣಾಧಿಕಾರಿಗಳು ಸಾಮೂಹಿಕ ಮದುವೆ ಕಾರ್ಯಕ್ರಮಕ್ಕೆ ಹೋಗಿ ವಧು-ವರರಲ್ಲಿ ಚುನಾವಣಾ ಜಾಗೃತಿ ಮೂಡಿಸಿದರು.

ವಿವಾಹ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ

By

Published : Apr 6, 2019, 8:42 PM IST

ಹಾವೇರಿ: ಜಿಲ್ಲಾ ಚುನಾವಣಾಧಿಕಾರಿಗಳು ಜಿಲ್ಲೆಯಲ್ಲಿ ಅತ್ಯಧಿಕ ಮತದಾನ ನಡೆಯಲು ಭರದ ಸಿದ್ಧತೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವಿರಲಿ ಅಲ್ಲಿ ವಿವಿಪ್ಯಾಟ್ ಮತ್ತು ಬ್ಯಾಲೇಟ್ ಯುನಿಟ್ ತಗೆದುಕೊಂಡು ಹೋಗಿ ಮತದಾನ ಮಾಡುವ ಕುರಿತಂತೆ ಪ್ರಾತ್ಯಕ್ಷಿಕೆ ನೀಡುತ್ತಿದ್ದಾರೆ. ಶನಿವಾರ ಹಾವೇರಿ ಸಮೀಪದ ಕಳ್ಳಿಹಾಳದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು, ಮತದಾನ ಕುರಿತಂತೆ ಪ್ರಾತ್ಯಕ್ಷಿಕೆ ನೀಡಿದರು.

ವಿವಾಹ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ

ವಧು-ವರರಿಗೆ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು. ಜೊತೆಗೆ ಮದುವೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರಿಗೆ ಮತದಾನ ಕುರಿತಂತೆ ತಿಳುವಳಿಕೆ ನೀಡಿದರು.

For All Latest Updates

TAGGED:

ABOUT THE AUTHOR

...view details