ಹಾವೇರಿ: ಕಳಪೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಂಜಿನಿಯರ್ ಮತ್ತು ಗುತ್ತಿಗೆದಾರನನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಹಿರೇಮತ್ತೂರು ಗ್ರಾಮದ ಬಳಿ ನಡೆದಿದೆ.
ಕಳಪೆ ಕಾಮಗಾರಿ; ಇಂಜಿನಿಯರ್, ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು - villagers outrage
ಹಿರೇಮತ್ತೂರು ಮತ್ತು ಗಂಗಾಪುರ ಗ್ರಾಮದ ನಡುವೆ 3 ಕಿಮೀ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ನಿರ್ಮಾಣ ಮಾಡುತ್ತಿರುವಾಗಲೇ ರಸ್ತೆ ಕಿತ್ತು ಹೋಗುತ್ತಿದೆ. ಹೀಗಾಗಿ ಗ್ರಾಮಸ್ಥರು ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಬಸವಣ್ಣೆಪ್ಪ ಮತ್ತು ಗುತ್ತಿಗೆದಾರ ಪ್ರಕಾಶ ಅವರನ್ನು ತರಾಟೆಗೆ ತೆಗೆದುಕೊಂಡರು.
ಇಂಜಿನಿಯರ್, ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಹಿರೇಮತ್ತೂರು ಮತ್ತು ಗಂಗಾಪುರ ಗ್ರಾಮದ ನಡುವೆ 3 ಕಿಮೀ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ನಿರ್ಮಾಣ ಮಾಡುತ್ತಿರುವಾಗಲೇ ರಸ್ತೆ ಕಿತ್ತು ಹೋಗುತ್ತಿದೆ. ಹೀಗಾಗಿ ಗ್ರಾಮಸ್ಥರು ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಬಸವಣ್ಣೆಪ್ಪ ಮತ್ತು ಗುತ್ತಿಗೆದಾರ ಪ್ರಕಾಶ ಅವರನ್ನು ತರಾಟೆಗೆ ತೆಗೆದುಕೊಂಡರು.
ಆದಷ್ಟು ಬೇಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು, ಗುತ್ತಿಗೆದಾರರು ಮತ್ತು ಇಂಜಿನಿಯರ್ ಜೊತೆ ಸಭೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.