ಕರ್ನಾಟಕ

karnataka

ETV Bharat / state

'ನೇಮಕಾತಿಯಲ್ಲಿ ಅನ್ಯಾಯ..' ಪೌರಕಾರ್ಮಿಕರ ಕಣ್ಣೀರು

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ತಮ್ಮ ಸೇವಾ ಹಿರಿತನವನ್ನು ಕಡೆಗಣಿಸಲಾಗಿದೆ ಎಂದು ನೋವು ತೋಡಿಕೊಂಡರು.

ಪೌರಕಾರ್ಮಿಕರು
ಪೌರಕಾರ್ಮಿಕರು

By

Published : Dec 15, 2022, 9:50 PM IST

ಪೌರಕಾರ್ಮಿಕರು

ಹಾವೇರಿ: ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಬಂಕಾಪುರದಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಪೌರಕಾರ್ಮಿಕರು ತಮ್ಮ ಸೇವಾ ಹಿರಿತನ ಕಡೆಗಣಿಸಲಾಗಿದೆ. ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 8 ಪೌರಕಾರ್ಮಿಕರ ನೇಮಕಾತಿ ಮಾಡಿಕೊಳ್ಳದೇ ಹಣ ನೀಡಿದವರನ್ನು ನೇಮಕಾತಿ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಇದೀಗ ನಮ್ಮನ್ನು ಕೆಲಸದಿಂದ ತೆಗೆದು ಹಾಕಿದ್ದು ಜೀವನ ದುಸ್ತರವಾಗಿದೆ. ಎಂಟು ಪೌರಕಾರ್ಮಿಕರಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಉಳಿದವರು ಮಾನಸಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಬೇಸರ ತೋಡಿಕೊಂಡರು. ಅನ್ಯಾಯ ಮಾಡಿದ ಮೂವರು ಅಧಿಕಾರಿಗಳನ್ನು ತಕ್ಷಣದಿಂದಲೇ ಅಮಾನತು ಮಾಡಬೇಕು. ಈ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಭರವಸೆ: ಸಿಎಂಗೆ ಅಭಿನಂದನೆ ಸಲ್ಲಿಸಿದ ಪೌರಕಾರ್ಮಿಕರು

ABOUT THE AUTHOR

...view details