ಹಾವೇರಿ:ಬಿಜೆಪಿ ಶಾಸಕ ಸಿ.ಎಂ.ಉದಾಸಿ ಅಂತ್ಯಕ್ರಿಯೆ ಇಂದು ಸಂಜೆ ಜಿಲ್ಲೆಯ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ನಡೆಯಲಿದೆ.
ಬೆಂಗಳೂರಿನಿಂದ ವಿಶೇಷ ವಾಹನದಲ್ಲಿ ಹೊರಟಿರೋ ಪಾರ್ಥಿವ ಶರೀರ ಮಧ್ಯಾಹ್ನ 12 ಗಂಟೆಗೆ ಹಾನಗಲ್ ತಲುಪಲಿದೆ. ಮಧ್ಯಾಹ್ನ ಒಂದು ಗಂಟೆಗೆ ಗೌಳಿ ಗಲ್ಲಿಯ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ವಿರಕ್ತಮಠದ ಆವರಣದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ.