ಹಾನಗಲ್ (ಹಾವೇರಿ): ತಾಲೂಕಿನಲ್ಲಿರುವ ಪರಿಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತಾಲೂಕಿನ ವಿವಿಧ ಸಂಸ್ಥೆಗಳಿಂದ ನೀಡಿದ ಮಾಸ್ಕ್ಗಳ್ನು ಉಚಿತವಾಗಿ ನೀಡಲಾಗುವುದು ಎಂದು ಹಾನಗಲ್ ಬಿಇಒ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದತ್ತ ಗಮನ ಹರಿಸಲು ಸಂಬಂಧಪಟ್ಟ ಶಾಲಾ ಶಿಕ್ಷಕರನ್ನ ನೇಮಿಸಲಾಗಿದೆ ಎಂದರು.
ಹಾನಗಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆಗೆ ಸಿದ್ಧತೆ
ಕೊರೊನಾ ಲಾಕ್ಡೌನ್ ಸಡಿಲಿಕೆಯ ಬಳಿಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಸಲು ಸರ್ಕಾರ ತೀರ್ಮಾನಿಸಿದ್ದು. ಇದಕ್ಕಾಗಿ ತಯಾರಿಯಲ್ಲಿ ತೊಡಗಿದೆ. ಈ ನಡುವೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ಮಾಸ್ಕ್ಗಳನ್ನು ವಿತರಿಸಲು ಮುಂದಾಗಿರುವುದಾಗಿ ಹಾನಗಲ್ನ ಬಿಇಒ ತಿಳಿಸಿದ್ದಾರೆ.
ಹಾನಗಲ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆಗೆ ಸಿದ್ಧತೆ
ವಿದ್ಯಾರ್ಥಿಗಳು ಪುನರ್ ಮನನ ಮಾಡಿಕೊಳ್ಳಲು ಚಂದನ ವಾಹಿನಿಯಲ್ಲಿ ವಿಷಯಗಳನ್ನ ಪ್ರಸಾರ ಮಾಡಲಾಗುತ್ತಿದೆ, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆಯನ್ನು ಎದುರಿಸಬಹುದಾಗಿದೆ ಸರ್ಕಾರದ ಅಧಿಸೂಚನೆಯಂತೆ ಎಸ್ಎಸ್ಎಲ್ಸಿ ಪರೀಕ್ಷೆಗೆ ನಾವು ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.