ಹಾವೇರಿ:ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲೆಯಾದ್ಯಂತ ರವಿವಾರ ನಿಷೇಧಾಜ್ಞೆ ಹೊರಡಿಸಿದ್ದಾರೆ. ಮುಂಜಾನೆ 7 ರಿಂದ ಸಂಜೆ 7ರ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಘೋಷಿಸಲಾಗಿದೆ.
ಹಾವೇರಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ - ಹಾವೇರಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ
ಹಾವೇರಿ ಜಿಲ್ಲೆಯಾದ್ಯಂತ ರವಿವಾರ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ನಿಷೇಧಾಜ್ಞೆ ಹೊರಡಿಸಿದ್ದಾರೆ.
ನಿಷೇದಾಜ್ಞೆ
ಜಿಲ್ಲೆಯಲ್ಲಿ ಬಸ್ ಆಟೋ ಸೇರಿದಂತೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಇನ್ನು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಮದ್ಯದಂಗಡಿ ಬಂದ್ ಮಾಡಲಾಗಿದ್ದು, ಮುಂಜಾನೆ 7 ರಿಂದ ಸಂಜೆ 7 ರವರೆಗೆ ಸಾರ್ವಜನಿಕರು ಮನೆಯಲ್ಲಿರುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಪೇಪರ್ ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತುಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಇನ್ನು ನಿಷೇಧಾಜ್ಞೆ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.