ಹಾವೇರಿ: ಸರಕು ಸಾಗಾಣಿಕೆ ವಾಹನಗಳಲ್ಲಿ ಜನರ ಪ್ರಯಾಣವನ್ನು ನಿಷೇಧಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಆದೇಶಿಸಿದ್ದಾರೆ.
ಹಾವೇರಿ ಎಸ್ಪಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಒಂದು ವೇಳೆ ಸರಕು ಸಾಗಾಣಿಕೆ ವಾಹನದಲ್ಲಿ ಜನರನ್ನ ಕೊಂಡೊಯ್ದರೆ, ವಾಹನ ಚಾಲಕರ ಲೈಸನ್ಸ್ ರದ್ದು ಮಾಡಿ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದಿದ್ದಾರೆ. ಈ ಕುರಿತಂತೆ ಇದೇ 24 ರಂದು ವಿಶೇಷ ಸಭೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿ ಕೂಡ ತಿಳಿಸಿದ್ದಾರೆ.
ಸುರಕ್ಷತೆಯ ದೃಷ್ಟಿಯಿಂದ ವಿದ್ಯಾರ್ಥಿಗಳು, ಕಾರ್ಮಿಕರು ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಸುವುದನ್ನು ಜಿಲ್ಲೆಯಲ್ಲಿ ನಿರ್ಭಂಧಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಉಚ್ಛನ್ಯಾಯಾಲದಲ್ಲಿ ರಿಟ್ ಪಿಟೇಷನ್ ದಾಖಲಾಗಿದೆ. ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಕೊಂಡೊಯ್ಯದರೆ ವಾಹನಗಳ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ.
ಅಷ್ಟೇಅಲ್ಲದೆ ಸಾರಿಗೆ ಇಲಾಖೆಯ ಜಂಟಿ ಕಾರ್ಯಾಚರಣೆಯೊಂದಿಗೆ ವಾಹನಗಳ ಪರವಾನಿಗೆಗಳನ್ನು ಅಮಾನತು ಹಾಗೂ ರದ್ದುಗೊಳಿಸಲು ಕ್ರಮವಹಿಸಲಾಗುವುದು. ಟ್ರ್ಯಾಕ್ಟರ್ಗಳಲ್ಲಿ ಪ್ರಯಾಣ, ರಸ್ತೆ ಮೇಲೆ ಕೃಷಿ ಒಕ್ಕಲು ಮಾಡುವುದು ಕಂಡು ಬಂದರೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.