ಹಾವೇರಿ:ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಅದನ್ನು ತಡೆಗಟ್ಟುವಂತೆ ಆಗ್ರಹಿಸಿ ಗ್ರಾಮದ ಮುಖಂಡರು ಗ್ರಾಮ ಪಂಚಾಯತಿಯ ಪಿಡಿಒ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿ - illegal liquor sale in village
ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮಸ್ಥರು ಒತ್ತಾಯಿಸಿ ಮನವಿ ಸಲ್ಲಿಸಿದರು.
![ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿ Protest against illegal liquor sale](https://etvbharatimages.akamaized.net/etvbharat/prod-images/768-512-8766784-860-8766784-1599832498084.jpg)
ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿ
ಗ್ರಾಮದಲ್ಲಿನ ಕಿರಾಣಿ ಅಂಗಡಿ, ಚಹಾದ ಅಂಗಡಿ ಮತ್ತು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಈ ದಂಧೆಯಿಂದ ಗ್ರಾಮದಲ್ಲಿರುವ ಮಕ್ಕಳು, ಯುವಕರು ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ. ಇದರಿಂದ ಅನೇಜ ಕುಟುಂಬಗಳು ಹಾಳಾಗುತ್ತಿವೆ. ಆದ್ದರಿಂದ ಈ ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.