ರಾಣೆಬೆನ್ನೂರು:ಸೂಕ್ತ ಭದ್ರತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಣೆಬೆನ್ನೂರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸೂಕ್ತ ಭದ್ರತೆ ನೀಡುವಂತೆ ರಾಣೆಬೆನ್ನೂರಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ - Protest in ranebennuru
ಸೂಕ್ತ ಭದ್ರತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಣೆಬೆನ್ನೂರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಹಾಗಾಗಿ ತಿಂಗಳಿಗೆ 12 ಸಾವಿರ ರೂಪಾಯಿ ವೇತನ ನೀಡುವಂತೆ ಒತ್ತಾಯಿಸಿದರು.
ಅಲ್ಲದೇ, ಕೊರೊನಾ ತಡೆಯುವಲ್ಲಿ ನಮ್ಮ ಪಾತ್ರ ಮಹತ್ತರವಾಗಿದ್ದು, ಸೂಕ್ತ ರಕ್ಷಣಾ ಸಾಮಗ್ರಿ ವಿತರಿಸುವಂತೆ ಮನವಿ ಮಾಡಿದರು. ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಮಾತ್ರ ಆಶಾಕಾರ್ಯಕರ್ತರ ಬಗ್ಗೆ ಗಮಹರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ನಮಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ತಮ್ಮ ಬೇಡಿಕೆ ಈಡೇರಿಸುವಂತೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.