ಹಾವೇರಿ: ನಗರದಲ್ಲಿ ಮಂಗಳವಾರ ನಡೆದ ಯುವತಿಯ ಮೇಲಿನ ಆ್ಯಸಿಡ್ ದಾಳಿ ಖಂಡಿಸಿ,ಇಂದು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯುವತಿ ಮೇಲಿನ ಆ್ಯಸಿಡ್ ದಾಳಿ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - ಹಾವೇರಿ ಸುದ್ದಿ
ನಗರದಲ್ಲಿ ಮಂಗಳವಾರ ನಡೆದ ಯುವತಿಯ ಮೇಲಿನ ಆ್ಯಸಿಡ್ ದಾಳಿ ಖಂಡಿಸಿ ಇಂದು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯುವತಿ ಮೇಲಿನ ಆ್ಯಸಿಡ್ ದಾಳಿ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳಿದ್ದರೂ ಆ್ಯಸಿಡ್ ಎಲ್ಲೆಂದರಲ್ಲಿ ಮಾರಾಟವಾಗುತ್ತಿದೆ. ಈ ಕೂಡಲೇ ಆರೋಪಿಯನ್ನ ಬಂಧಿಸಿ, ಸಂತ್ರಸ್ತೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಪೊಲೀಸ್ ಇಲಾಖೆ ಆರೋಪಿಯನ್ನ ಶೀಘ್ರದಲ್ಲಿ ಬಂಧಿಸದಿದ್ದರೆ, ಹಾವೇರಿ ಬಂದ್ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ,ದಲಿತ ಸಂಘರ್ಷ ಸಮಿತಿ,ಡಿವೈಎಫ್ಐ ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆಗಳು ಪಾಲ್ಗೊಂಡಿದ್ದವು.