ಹಾವೇರಿ: ಕೊರೊನಾ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರು ಮನೆಯಲ್ಲಿಯೇ ಆನ್ಲೈನ್ ಮೂಲಕ ಪ್ರತಿಭಟನೆ ಆರಂಭಿಸಿದ್ದಾರೆ.
ಬೇಡಿಕೆ ಈಡೇರಿಸುವಂತೆ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಆಗ್ರಹ - Haveri protest
ಕೊರೊನಾ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರು ಮನೆಯಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ.
ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರ ಪ್ರತಿಭಟನೆ
ಹಾವೇರಿ ತಾಲೂಕು ಗುತ್ತಲದಲ್ಲಿ ಸ್ಟ್ರೈಕ್ ಫ್ರಂ ಹೋಮ್ ಎಂದು ನೌಕರರು ಪ್ರತಿಭಟನೆ ಆರಂಭಿಸಿದ್ದಾರೆ. ಇದೇ 27 ರಿಂದ ಮನೆಯಲ್ಲಿ ಪ್ರತಿಭಟನೆ ಆರಂಭಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪ್ರತಿಭಟನೆಯನ್ನು ಶುಕ್ರವಾರದವರೆಗೆ ನಡೆಸುವುದಾಗಿ ತಿಳಿಸಿದ್ದಾರೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಪ್ರತೀ ಬಾರಿ ತಮಗೆ ಹುಸಿ ಭರವಸೆ ನೀಡಲಾಗುತ್ತಿದೆ ಎಂದು ನೌಕರರು ಆರೋಪಿಸಿದ್ದಾರೆ. ಸರ್ಕಾರ ಆದಷ್ಟು ಬೇಗ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.