ಹಾವೇರಿ:ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 15 ರಿಂದ 18 ರವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿಗೆ ನಿರ್ಧರಿಸಲಾಗಿದೆ. ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ ಈ ವಿಷಯವನ್ನ ತಿಳಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 15 -18 ರವರೆಗೆ ಪ್ರತಿಭಟನಾ ರ್‍ಯಾಲಿ - haveri latest news
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 15 ರಿಂದ 18 ರವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವುದಾಗಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.
ಹಾವೇರಿಯಲ್ಲಿ ಮಾತನಾಡಿದ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿಶ್ವನಾಥ್ ಜಿ.ಪಿ, ರ್‍ಯಾಲಿಯಲ್ಲಿ ಕನ್ನಡಪರ ಸಂಘಟನೆಗಳೆಲ್ಲ ಪಾಲ್ಗೊಳ್ಳಲಿದ್ದು, 18ಕ್ಕೆ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.
ಸುಮಾರು 600 ಕಿ.ಮೀ ರ್‍ಯಾಲಿ ಇದಾಗಲಿದ್ದು, ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಈ ರೀತಿಯ ರ್‍ಯಾಲಿ ನಡೆಸುತ್ತಿರುವುದಾಗಿ ತಿಳಿಸಿದರು. ಮಹದಾಯಿ ಯೋಜನೆ ತಕ್ಷಣ ಜಾರಿಗೆ, ನೆರೆ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ನಾಮಕರಣ ಸೇರಿದಂತೆ ಒಕ್ಕೂಟ ವಿವಿಧ ಬೇಡಿಕೆಗಳನ್ನಿಟ್ಟುಕೊಂಡಿದೆ. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವುದಾಗಿ ತಿಳಿಸಿದರು.