ಹಾವೇರಿ: ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಹಾವೇರಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘಟನೆ ಪ್ರತಿಭಟನೆ ನಡೆಸಿತು.
ಹಾವೇರಿಯಲ್ಲಿ ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ರಸ್ತೆ ತಡೆ - ರೈತ ಸಂಘಟನೆ ಪ್ರತಿಭಟನೆ
ಹಾವೇರಿಯಲ್ಲಿ ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘಟನೆ ಪ್ರತಿಭಟನೆ ನಡೆಸಿತು. ರಸ್ತೆ ತಡೆಯನ್ನು ಹಿಂದೆ ಪಡೆಯದ ಕಾರಣ ಪೊಲೀಸರು ರೈತರನ್ನ ವಶಕ್ಕೆ ಪಡೆದರು.
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೆಲಕಾಲ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಕೂಡಲೇ ರೈತ ವಿರೋಧಿ ನೀತಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಸೇರಿದಂತೆ ವಿವಿಧ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಾರ್ ಕೋಲು ಬಾರಿಸಿ ಅಡ್ಡಲಾಗಿ ಮಲಗಿ ಬಂಡಿಗಳನ್ನ ರಸ್ತೆಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆಯನ್ನು ಹಿಂದೆ ಪಡೆಯದ ಕಾರಣ ಪೊಲೀಸರು ರೈತರನ್ನ ವಶಕ್ಕೆ ಪಡೆದರು. ಸುಮಾರು 15ಕ್ಕೂ ರೈತರನ್ನ ವಶಕ್ಕೆ ಪಡೆದ ನಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ವಾಹನಗಳ ಸಂಚಾರ ಆರಂಭವಾಯಿತು.