ಕರ್ನಾಟಕ

karnataka

ETV Bharat / state

ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿ ಬರಲಿದೆ: ಅನರ್ಹ ಶಾಸಕ ಆರ್.ಶಂಕರ್ ವಿಶ್ವಾಸ - 22 ರಂದು ಸುಪ್ರೀಂಕೋರ್ಟ್ ನಲ್ಲಿ  ವಿಚಾರಣೆ

ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ಸ್ಪೀಕರ್ ನಮ್ಮನ್ನು ಅನರ್ಹಗೊಳಿಸಿರುವುದು ಅಸಮಂಜಸ. ರಾಜ್ಯದ 17 ಶಾಸಕರ ಅನರ್ಹತೆ ಕುರಿತು ಇದೇ ತಿಂಗಳ 22 ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಈ ವೇಳೆ ಅನರ್ಹ ಶಾಸಕರ ಪರವಾಗಿ ತೀರ್ಪು ಬರಲಿದೆ ಎಂದು ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅನರ್ಹ ಶಾಸಕ ಆರ್.ಶಂಕರ್ ಮಾತನಾಡಿದ್ದಾರೆ

By

Published : Oct 8, 2019, 5:13 PM IST

ರಾಣೆಬೆನ್ನೂರು(ಹಾವೇರಿ) :ಸಮಿಶ್ರ ಸರ್ಕಾರದ ಸಮಯದಲ್ಲಿ ಸ್ಪೀಕರ್ ನಮ್ಮನ್ನು ಶಾಸಕತ್ವದಿಂದ ಅನರ್ಹಗೊಳಿಸಿರುವುದು ಅಸಮಂಜಸ. ರಾಜ್ಯದ 17 ಶಾಸಕರ ಅನರ್ಹತೆ ಪ್ರಕರಣ ಕುರಿತು ಇದೇ ತಿಂಗಳ 22 ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಈ ವಿಚಾರಣೆಯಲ್ಲಿ ಅನರ್ಹ ಶಾಸಕರ ಪರವಾಗಿ ತೀರ್ಪು ಬರಲಿದೆ ಎಂದು ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್. ಶಂಕರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅನರ್ಹ ಶಾಸಕ ಆರ್.ಶಂಕರ್

ನಗರದಲ್ಲಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ ಅವರು, ಒಂದು ವೇಳೆ ಸುಪ್ರೀಂಕೋರ್ಟ್‌ನಲ್ಲಿ ಅನರ್ಹತೆ ವಿಚಾರಣೆ ತಮ್ಮ ವಿರುದ್ದವಾಗಿ ತೀರ್ಪು ಬಂದರೆ, ಭವಿಷ್ಯದ ರಾಜಕೀಯ ಹಾದಿಯ ಕುರಿತು ಕ್ಷೇತ್ರದ ಜನರಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು. ಸದ್ಯ ಬಿಜೆಪಿ ನಮಗೆ ಎಲ್ಲಾ ರೀತಿಯ ನೆರವು ನೀಡುತ್ತಿದ್ದು, ರಾಜ್ಯ ಸರ್ಕಾರ ಅನರ್ಹ ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ್ರು.
ಉಪಚುನಾವಣೆ ನಡೆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ನಿರ್ಧರಿಸಿಲ್ಲ. ಕೋರ್ಟ್ ವಿಚಾರಣೆಯ ನಂತರ ತಿಳಿಸಲಾಗುವುದು. ಈ ನಡುವೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಹೆಚ್ಚು ಒತ್ತು ನೀಡುತ್ತೇನೆ ಎಂದು ಆರ್. ಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ರು.

ABOUT THE AUTHOR

...view details