ಕರ್ನಾಟಕ

karnataka

ETV Bharat / state

ರಾಣೆಬೆನ್ನೂರು ಉಪ ಚುನಾವಣೆ: ನವೆಂಬರ್​18 ನಾಮಪತ್ರ ಸಲ್ಲಿಸಲು ಕೊನೆಯ ದಿನ - Haveri Ranebennur by-election

ರಾಣೆಬೆನ್ನೂರು ಕ್ಷೇತ್ರಕ್ಕೆ ಡಿಸೆಂಬರ್​ 5 ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್​ 18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್​ ಬಸನಗೌಡ ಕೋಟೂರ ಹೇಳಿದರು.

ಸಹಾಯಕ ಚುನಾವಣಾಧಿಕಾರಿ ಬಸನಗೌಡ ಕೋಟೂರ ಮಾಹಿತಿ ನೀಡಿದರು

By

Published : Nov 15, 2019, 11:42 AM IST

ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರಕ್ಕೆ ಡಿಸೆಂಬರ್​ 5 ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ ​18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಸನಗೌಡ ಕೋಟೂರ ಹೇಳಿದರು.

ಉಪಚುನಾವಣೆ ವೇಳಾಪಟ್ಟಿ ಬಗ್ಗೆ ಸಹಾಯಕ ಚುನಾವಣಾಧಿಕಾರಿ ಬಸನಗೌಡ ಕೋಟೂರ ಮಾಹಿತಿ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, ನವೆಂಬರ್​ 11 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನವೆಂಬರ್​18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನವೆಂಬರ್​ 19ರಂದು ನಾಮಪತ್ರಗಳ‌ ಪರಿಶೀಲನೆ, 21ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಡಿಸೆಂಬರ್​ 5 ರಂದು ಮತದಾನ ನಡೆಯಲಿದ್ದು, 9ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಒಟ್ಟು 2,32,485 ಮತದಾರರಿದ್ದು, 1,18,396 ಪುರುಷರು, 1,14,076 ಮಹಿಳಾ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ABOUT THE AUTHOR

...view details