ರಾಣೇಬೆನ್ನೂರು: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಸೊಂಕು ದೃಢವಾದ ಹಿನ್ನೆಲೆ ಹಿರಿಯ ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮಕೈಗೊಂಡಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ.. ಮುಂಜಾಗ್ರತಾ ಕ್ರಮಕೈಗೊಂಡಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ - ಹಾವೇರಿ ಜಿಲ್ಲೆಯ ರಾಣೆಬೆನ್ನೂರು
ಆಸ್ಪತ್ರೆಯ ನರ್ಸ್ ಹಾಗೂ ಹೊರಗುತ್ತಿಗೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಆದರೆ, ನರ್ಸ್ ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡಿರುವುದರಿಂದ ಎಲ್ಲಾ ಸಿಬ್ಬಂದಿಗೆ ಆತಂಕ ಹೆಚ್ಚಾಗಿದೆ..
ಆಸ್ಪತ್ರೆಯ ನರ್ಸ್ ಹಾಗೂ ಹೊರಗುತ್ತಿಗೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಆದರೆ, ನರ್ಸ್ ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡಿರುವುದರಿಂದ ಎಲ್ಲಾ ಸಿಬ್ಬಂದಿಗೆ ಆತಂಕ ಹೆಚ್ಚಾಗಿದೆ. ಸೋಂಕು ಪತ್ತೆಯಾದ ನಂತರ ಸಹ ಆಸ್ಪತ್ರೆಗೆ ಸ್ಯಾನಿಟೈಸರ್ ಮಾಡಿಸದೆ ಹಿರಿಯ ಅಧಿಕಾರಿಗಳು ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ.
ಇದಕ್ಕೆ ಒಪ್ಪದ ಆಸ್ಪತ್ರೆ ಸಿಬ್ಬಂದಿ ಎಲ್ಲಾ ಸೇವೆ ಬಂದ್ ಮಾಡಿ ಪ್ರತಿಭಟಿಸಿದರು. ಇನ್ನು, ಮಹಿಳಾ ಆಸ್ಪತ್ರೆ ಬಂದ್ ಮಾಡಿದ ಕಾರಣ ಗರ್ಭಿಣಿಯರು ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆಯಿತು. ಕೊರೊನಾ ನೆಪ ಹೇಳಿ ಸಿಬ್ಬಂದಿ ಸೇವೆ ಬಂದ್ ಮಾಡಿದ ಕಾರಣ ರೋಗಿಗಳು ಆಸ್ಪತ್ರೆಗೆ ಬಂದು ವಾಪಸ್ ಹೋಗುತ್ತಿದ್ದರೂ ಸಿಬ್ಬಂದಿ ಕ್ಯಾರೆ ಎನ್ನಲಿಲ್ಲ.