ಕರ್ನಾಟಕ

karnataka

ETV Bharat / state

ಅನರ್ಹತೆ ಪ್ರಶ್ನಿಸಿ ನಾಳೆ ರೆಬೆಲ್​​​ ಶಾಸಕರಿಂದ ಸುಪ್ರೀಂ ಕೋರ್ಟ್​ ಮೊರೆ - ಮುಂಬೈನಲ್ಲಿರುವ ಅತೃಪ್ತ ಶಾಸಕರು

ಅನರ್ಹತೆ ಪ್ರಶ್ನಿಸಿ ರೆಬೆಲ್​ ಶಾಸಕರು ನಾಳೆ ಸುಪ್ರೀಂ ಕೋರ್ಟ್​ ಮೊರೆ ಹೋಗಲಿದ್ದಾರೆ. ಅನರ್ಹತೆ ಹಾಗೂ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿದ್ದಾರೆ ಎಂಬ ಬಗ್ಗೆ ಅರ್ಜಿ ಸಲ್ಲಿಸಲಿದ್ದಾರೆ.

ರೆಬೆಲ್​ ಶಾಸಕರು

By

Published : Jul 28, 2019, 8:21 PM IST

ಹಾವೇರಿ:ಸ್ಪೀಕರ್​ ರಮೇಶ್​ ಕುಮಾರ್​​ ಅವರು ತಮ್ಮನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ರೆಬೆಲ್​ ಶಾಸಕರು ನಾಳೆ ಸುಪ್ರೀಂ ಕೋರ್ಟ್​ ಮೊರೆ ಹೋಗಲಿದ್ದಾರೆ ಎಂದು ತಿಳಿದುಬಂದಿದೆ.

ವಾಟ್ಸಪ್​ ಪೋಸ್ಟ್

ಅನರ್ಹ ಶಾಸಕ ಬಿ.ಸಿ.ಪಾಟೀಲರ ಪುತ್ರಿ ಸೃಷ್ಟಿ ಪಾಟೀಲ ವಾಟ್ಸಪ್​ ಪೋಸ್ಟ್ ಮೂಲಕ ಈ ಬಗ್ಗೆ ತಿಳಿಸಿದ್ದಾರೆ. ಕೌರವ ಪ್ರೆಸ್ ಎಂಬ ಹೆಸರಿನ ವಾಟ್ಸಪ್​ ಗ್ರೂಪ್​ನಲ್ಲಿ ಪೋಸ್ಟ್ ಮಾಡಲಾಗಿದ್ದು, ಶಾಸಕರನ್ನು ಅನರ್ಹಗೊಳಿಸದ್ದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು ನಾಳೆ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿಸಲಾಗಿದೆ.

ಸದ್ಯ ಮುಂಬೈನಲ್ಲಿರುವ ಅತೃಪ್ತ ಶಾಸಕರು ಅನರ್ಹತೆ ಹಾಗೂ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details