ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ಅವಶ್ಯಕ: ಗಿರಿಜವ್ವ ಬ್ಯಾಲದಳ್ಳಿ
ತಾಲೂಕಾಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ. 7.5 ಮೀಸಲಾತಿ ಅವಶ್ಯಕತೆ ಇದೆ ಎಂದು ಜಿ.ಪಂ. ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ ಹೇಳಿದ್ರು.
ರಾಣೆಬೆನ್ನೂರು:ತಾಲೂಕಾಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ. 7.5 ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿ.ಪಂ. ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ ಪ್ರತಿಪಾದಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಎಸ್ಟಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೂಡ ಇದಕ್ಕೆ ಅನುಮೋದನೆ ನೀಡಬೇಕು. ವಾಲ್ಮೀಕಿ ಸಮುದಾಯದ ಜನ ರಾಜ್ಯದಲ್ಲಿ ಹಿಂದುಳಿದಿದ್ದು, ಶಿಕ್ಷಣ, ಉದ್ಯೋಗದಲ್ಲಿ ಈ ಮೀಸಲಾತಿ ಅವಶ್ಯಕತೆ ಇದೆ. ಸಮಾಜದ ಹಿತಕ್ಕಾಗಿ ವಾಲ್ಮೀಕಿ ಗುರಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು, ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ ಎಂದರು.