ಹಾವೇರಿ: ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಭಾನುವಾರ ನಡೆದ ರೌಡಿಶೀಟರ್ ಬರ್ಬರ ಹತ್ಯೆಯ ವಿಡಿಯೋ ವೈರಲ್ ಆಗಿದ್ದು, ಕಂದ್ಲಿ ಮತ್ತು ಕೊಡಲಿಯಿಂದ ಹಾಡಹಗಲೇ ನಡು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ರೌಡಿ ಶೀಟರ್ ಹಜರತ್ ಅಲಿಯಾಸ್ ಅನ್ವರ್ ಶೇಖ್ ಅಲಿಯಾಸ್ ಮೋಮಿನ್‌ನನ್ನ ಪಟ್ಟಣದ ಕಾರಡಗಿ ರಸ್ತೆಯಲ್ಲಿ ಭಾನುವಾರ ಸಂಜೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಸದ್ಯ ಘಟನೆಗೆ ಸಂಬಂಧಿಸಿ ವಿಡಿಯೋ ಒಂದು ವೈರಲ್ ಆಗಿದೆ. ವಿಡಿಯೋದಲ್ಲಿ ಮೂವರು ಯುವಕರು ಕಂದ್ಲಿ ಮತ್ತು ಕೊಡಲಿಯಿಂದ ಮುಖ ಮತ್ತು ಕುತ್ತಿಗೆಗೆ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ.