ಹಾವೇರಿ: ಉಕ್ರೇನ್ನ ಖಾರ್ಕಿವ್ ನಗರದ ಮೇಲೆ ರಷ್ಯಾ ನಡೆಸಿರುವ ಶೆಲ್ ದಾಳಿಯಲ್ಲಿ ಹಾವೇರಿಯ ಜಿಲ್ಲೆಯ 21 ವರ್ಷದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಸಾವಿಗೀಡಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಖಾರ್ಕಿವ್ನಲ್ಲಿ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡ್ತಿದ್ದ ನವೀನ್ ಇಂದು ಬೆಳಗ್ಗೆ ದಿನಸಿ ಖರೀದಿ ಮಾಡಲು ಕ್ಯೂನಲ್ಲಿ ನಿಂತಿದ್ದ ವೇಳೆ ರಷ್ಯಾ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಆತ ಸಾವನ್ನಪ್ಪಿರುವ ಸುದ್ದಿ ಕೇಳುತ್ತಿದ್ದಂತೆ ಪೋಷಕರಲ್ಲಿ ಶೋಕ ಮಡುಗಟ್ಟಿದೆ.