ಹಾವೇರಿ:ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಕುರಿತಂತೆ ಈಗಾಗಲೇ ನಮ್ಮ ಪಕ್ಷದವರು ಪ್ರಶ್ನೆ ಎತ್ತಿದ್ದು, ಈ ಕುರಿತಂತೆ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಕುರಿತ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.
ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ
ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಒಂದು ಕಡೆ ಮಾತುಕತೆ ನಡೆದಿದೆ. ಬಹುಶಃ ಮೈತ್ರಿಯಾದರೆ ಹೆಚ್ಚು ಸ್ಥಾನಗಳು ಬರಬಹುದು. ಈ ಕುರಿತಂತೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು. ಇನ್ನು ಪ್ರಸ್ತುತ ಕೊರೊನಾ ಇರುವ ಕಾರಣ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಹೆಚ್ಚು ಜನ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದರು.