ಹಾವೇರಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದಲೇ ವರುಣನ ಆರ್ಭಟ ಜೋರಾಗಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಹಾವೇರಿ ಜಿಲ್ಲೆಯಲ್ಲಿ ವರುಣಾರ್ಭಟ: ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
ಚಂಡಮಾರುತ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳನ್ನು ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತದ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್
ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ಈ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಹರಿಯುವ ನದಿಗಳ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಧರ್ಮಾ, ವರದಾ, ಕುಮದ್ವತಿ ಮತ್ತು ತುಂದಭದ್ರಾ ನದಿಗಳ ಒಳಹರಿವು ಅಧಿಕವಾಗಿದೆ. ಸುರಕ್ಷಿತವಾಗಿರುವಂತೆ ನದಿ ತಟದ ಗ್ರಾಮಗಳಿಗೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.