ಹಾನಗಲ್:ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿದೆ. ಈ ಸೋಂಕು ತಡೆಗಟ್ಟುವಲ್ಲಿ ನಾವೆಲ್ಲರೂ ಸ್ವಯಂ ಜಾಗೃತಿಯನ್ನು ಕೈಗೊಳ್ಳಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ತಿಳಿಸಿದರು.
ಕೊರೊನಾ ವೈರಸ್ ನಿಯಂತ್ರಣಕ್ಕೆ ಸ್ವಯಂ ಜಾಗೃತಿ ಅಗತ್ಯ: ಪರಿಷತ್ ಸದಸ್ಯ ಶ್ರೀನಿವಾಸ ಮಾನೆ - Hanagal latest news 2020
ನಾವು ಈ ವೈರಸ್ ಹಿಮ್ಮೆಟ್ಟಿಸಲು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸನ್ನದ್ಧರಾಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.
ಶ್ರೀನಿವಾಸ ಮಾನೆ...
ನಗರದಲ್ಲಿ ಮಾತನಾಡಿದ ಅವರು, ವೈರಾಣು ಹಿಮ್ಮೆಟ್ಟಿಸಲು ಆಗಾಗ ಕೈಗಳನ್ನು ಸಾಬೂನಿನಿಂದ ತೊಳೆಯುವುದನ್ನು ರೂಢಿ ಮಾಡಿಕೊಳ್ಳಬೇಕು. ಹಾನಗಲ್ ತಾಲೂಕಿನ ಜನತೆಯೊಂದಿಗೆ ನಾವಿದ್ದೇವೆ, ಯಾರೂ ಕೂಡ ಎದೆಗುಂದುವ ಅವಶ್ಯಕತೆ ಇಲ್ಲ. ಧೈರ್ಯವಾಗಿರಿ ಎಂದು ತಿಳಿಸಿದರು.