ಹಾವೇರಿ: ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಏಳು ಜನರು ಗಾಯಗೊಂಡಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕವಿತಾ ಮೂಲಿಮನಿ(30) ಮೃತ ಮಹಿಳೆ. ಗಾಯಾಳುಗಳನ್ನ ರತ್ನಾ (35), ಮಾರುತಿ (45), ಶಶಿಕಲಾ (35), ರವೀಂದ್ರಪ್ಪ (65), ಸುಧಾ (60) ,ಸಾಕಮ್ಮ (45) ಮತ್ತು ಜುಬೇದಾಬಾನು (32) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಹಾಗೂ ಹಾವೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.