ಕರ್ನಾಟಕ

karnataka

ETV Bharat / state

ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ನೀಡಿದ ನ್ಯಾಯಾಲಯ - ಪೋಕ್ಸೋ ವಿಶೇಷ ನ್ಯಾಯಾಲಯ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ಒಂದು ಲಕ್ಷದ 10 ಸಾವಿರ ದಂಡ ವಿಧಿಸಿ ಜಿಲ್ಲೆ ರಾಣೆಬೆನ್ನೂರು ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

Pocso Special Court

By

Published : Aug 17, 2019, 9:22 AM IST

ಹಾವೇರಿ:ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ಒಂದು ಲಕ್ಷದ 10 ಸಾವಿರ ದಂಡ ವಿಧಿಸಿ ಜಿಲ್ಲೆ ರಾಣೆಬೆನ್ನೂರು ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಪೋಕ್ಸೋ ವಿಶೇಷ ನ್ಯಾಯಾಲಯ

ಆರೋಪಿ ರಾಜು ಬಂಡಿವಡ್ಡರ ಎಂಬಾತ ಅಪ್ರಾಪ್ತ ಬಾಲಕಿಯನ್ನ ಮದುವೆಯಾಗುವುದಾಗಿ ನಂಬಿಸಿ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಎಸೆಗಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 1.10 ಲಕ್ಷ ರೂ. ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ (ಪೋಕ್ಸೋ) ವಿಶೇಷ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸದಾನಂದಸ್ವಾಮಿ ಕೆ.ಸಿ. ಅವರು ತೀರ್ಪು ನೀಡಿದ್ದಾರೆ.

ಪ್ರಕರಣದ ವಿವರ:
ರಾಣೇಬೆನ್ನೂರು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಆರೋಪಿ ವಿರಾಪೂರ ಗ್ರಾಮದ ಆರೋಪಿ ರಾಜು ಮದುವೆಯಾಗುವುದಾಗಿ ನಂಬಿಸಿದ್ದನು. ಅಲ್ಲದೇ ಬಾಲಕಿಯನ್ನ ಅಪಹರಣ ಮಾಡಿ ಬಾಲಕಿಯ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸೆಗಿದ್ದನು. ಪ್ರಕರಣ ರಾಣೇಬೆನ್ನೂರ ಠಾಣೆಯಲ್ಲಿ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ರುಜುವಾತಾದ ಕಾರಣ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ.

ABOUT THE AUTHOR

...view details