ರಾಣೆಬೆನ್ನೂರು: ಆರ್. ಶಂಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಬಿಜೆಪಿ ಸರ್ಕಾರ ಬಂದಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬಿಎಸ್ವೈ ಚುನಾವಣಾ ಪ್ರಚಾರ ಅಬ್ಬರ: ಆರ್. ಶಂಕರ್, ಕೇಲಗಾರಗೆ ಬಿಗ್ ಆಫರ್ - ಸಿಎಂ ಬಿ.ಎಸ್. ಯಡಿಯೂರಪ್ಪ
ರಾಣೆಬೆನ್ನೂರು ನಗರದ ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತಯಾಚಿಸಿದ್ರು. ಆರ್.ಶಂಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಬಿಜೆಪಿ ಸರ್ಕಾರ ಬಂದಿದೆ ಎಂದು ಈ ವೇಳೆ ಹೇಳಿದ್ರು.
ಸಿಎಂ ಮತಯಾಚನೆ
ನಗರದ ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪರ ಮತಯಾಚನೆ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ 17 ಶಾಸಕರಿಗೆ ಸರಿಯಾಗಿ ಸ್ಪಂದಿಸಿರಲಿಲ್ಲ. ಇದರಿಂದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಯೇ ಹೊರತು ಅವರು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ ಎಂದರು.
ಆರ್.ಶಂಕರ್ ಅವರಿಗೆ ನಾನು ಎಂಎಲ್ಸಿ ಮಾಡಿ, ಸಚಿವರನ್ನಾಗಿ ಮಾಡುತ್ತೇನೆಂದು ಬಹಿರಂಗವಾಗಿಯೇ ಬಿಎಸ್ವೈ ಘೋಷಿಸಿದ್ರು. ಆದ್ರೆ ಹಿಂದಿನ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೇಲಗಾರ ಅವರಿಗೆ ಸೂಕ್ತ ಸ್ಥಾನಮಾನವನ್ನು ಕೂಡ ನೀಡಲಾಗುವುದು ಎಂದು ಭರವಸೆ ನೀಡಿದರು.