ಹಾವೇರಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ ಪ್ರೀತಿ ಪ್ರೇಮ ಪ್ರಣಯ ಎಂದು ಸುತ್ತಾಡಿದ್ದ ಜೋಡಿಯೊಂದು ಪೊಲೀಸ್ ಠಾಣೆ ಮೆಟ್ಟಿಲೇರಿ ಲಾಕ್ ಡೌನ್ ಸಮಯದಲ್ಲಿ ಸರಳವಾಗಿ ಮದುವೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಯುವಕ ಹಾಗೂ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಯುವತಿ ಫೇಸ್ ಬುಕ್, ವಾಟ್ಸ್ ಆ್ಯಪ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಈ ಪರಿಚಯ ಸ್ನೇಹದ ಬಳಿಕ ಪ್ರೀತಿಗೆ ತಿರುಗಿತ್ತು. ಇಬ್ಬರ ನಡುವೆ ಪ್ರೀತಿ, ಪ್ರೇಮ, ಪ್ರಣಯ ಎಂದೆಲ್ಲ ನಡೆದು ಇಬ್ಬರೂ ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.
ಅದ್ಯಾಕೋ ಏನೋ ಇತ್ತೀಚೆಗೆ ಯುವಕ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ದೂರ ಮಾಡಿದ್ದ. ಕಳೆದ ಐದಾರು ತಿಂಗಳಿನಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಕೆಯ ಕೈಗೆ ಸಿಗಲಿಲ್ಲ. ಇದರಿಂದ ಬೇಸತ್ತ ಹುಡುಕಿ ಪ್ರಿಯಕರನ ಮನೆ ಹುಡುಕಿಕೊಂಡು ಬಂದು ಆತನ ಪೋಷಕರೊಂದಿಗೆ ಮಾತನಾಡಿ ಮದುವೆ ಮಾಡಿಸುವಂತೆ ಕೇಳಿಕೊಂಡಿದ್ದಾಳೆ.