ಕರ್ನಾಟಕ

karnataka

ETV Bharat / state

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಚುರುಕು - ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಚುರುಕು...

ಸತತ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದು, ತಾಲೂಕಿನಾದ್ಯಂತ ವಿವಿಧ ಬೆಳೆಗಳ ಬಿತ್ತನೆ ಕಾರ್ಯ ಆರಂಭಗೊಂಡಿದೆ.

sowing
ಬಿತ್ತನೆ ಕಾರ್ಯ

By

Published : Jun 5, 2020, 2:02 PM IST

ಹಾನಗಲ್:ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದು, ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ವರುಣ ಸರಿಯಾದ ಸಮಯಕ್ಕೆ ಬಂದು ರೈತನಿಗೆ ಆಸರೆಯಾಗಿದ್ದಾನೆ.

ಮೆಕ್ಕೆಜೋಳ, ಭತ್ತ, ಸೋಯಾಬಿನ್, ಶೇಂಗಾ ಸೇರಿದಂತೆ ಹಲವು ಬೆಳೆಗಳ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಬಿತ್ತನೆಯಾದ ನಂತರವೂ ವರುಣ ಇದೇ ರೀತಿ, ನಮ್ಮ ಕೈ ಹಿಡಿದರೆ ಉತ್ತಮ ಫಸಲು ತೆಗೆಯಬಹುದು ಎನ್ನುತ್ತಾರೆ ಇಲ್ಲಿನ ರೈತರು‌.

ಹಾವೇರಿ ಜಿಲ್ಲೆಯಲ್ಲಿ ಚುರುಕುಗೊಂಡ ಬಿತ್ತನೆ ಕಾರ್ಯ

ಸರ್ಕಾರ ಕೃಷಿ ಕೇಂದ್ರಗಳ ಮೂಲಕ ಬಿತ್ತನೆ ಬೀಜಗಳನ್ನ ವಿತರಿಸುತ್ತಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಗೊಬ್ಬರದ ಕೊರತೆ ಕಾಣದಂತೆ ಮುಂಜಾಗ್ರತೆ ವಹಿಸಿದರೆ ಸಾಕು ಎಂಬುದು ರೈತರ ಮನವಿ.

ABOUT THE AUTHOR

...view details