ಕರ್ನಾಟಕ

karnataka

ETV Bharat / state

ಹಾವೇರಿಯ ದಾನಮ್ಮದೇವಿ ದೇಗುಲದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ - ದಾನಮ್ಮದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜೆ

ಶ್ರಾವಣ ಮಾಸದ ಅಂಗವಾಗಿ ಹಾವೇರಿಯ ದಾನಮ್ಮದೇವಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ಕೈಗೊಳ್ಳಲಾಗಿದ್ದು, ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Danammadevi Temple
ಹಾವೇರಿಯ ದಾನಮ್ಮದೇವಿ ದೇವಸ್ಥಾನ

By

Published : Aug 6, 2020, 3:42 PM IST

ಹಾವೇರಿ: ಜಿಲ್ಲೆಯಾದ್ಯಂತ ಶ್ರಾವಣ ಮಾಸದ ಸಂಭ್ರಮ ಮನೆ ಮಾಡಿದ್ದು, ನಗರದ ದಾನಮ್ಮದೇವಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿತು.

ಹಾವೇರಿಯ ದಾನಮ್ಮದೇವಿ ದೇವಸ್ಥಾನ

ದಾನಮ್ಮದೇವಿಗೆ ಮುಂಜಾನೆಯಿಂದ ರುದ್ರಾಭಿಷೇಕ, ವಿಶೇಷ ಪೂಜೆ ಕೈಗೊಳ್ಳಲಾಗಿದ್ದು, ದೇವಸ್ಥಾನಕ್ಕೆ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು. ಪ್ರತೀ ವರ್ಷವೂ ಲೋಕ ಕಲ್ಯಾಣಾರ್ಥವಾಗಿ ಶ್ರಾವಣಮಾಸದಲ್ಲಿ ಈ ದೇವಸ್ಥಾನದಲ್ಲಿ ರುದ್ರಾಭಿಷೇಕ ಕೈಗೊಳ್ಳಲಾಗುತ್ತಿತ್ತು. ಆದರೆ ಪ್ರಸ್ತುತ ವರ್ಷ ಕೊರೊನಾ ಇರುವ ಕಾರಣ ಶ್ರಾವಣ ಮಾಸವನ್ನು ಸಂಕ್ಷಿಪ್ತವಾಗಿ ಆಚರಿಸಲಾಗುತ್ತಿದೆ.

ಈ ವರ್ಷ ಕೊರೊನಾ ಕಾರಣದಿಂದಾಗಿ ಸರ್ಕಾರದ ನಿಯಮದಂತೆ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್​​ ಧರಿಸಿಕೊಂಡು ಸ್ಯಾನಿಟೈಸರ್ ಬಳಕೆ ಮಾಡುತ್ತಿರುವುದಾಗಿ ಆಡಳಿತ ಮಂಡಳಿ ಅಧ್ಯಕ್ಷ ಶೋಭಾ ಮಾಗಾವಿ ತಿಳಿಸಿದರು.

ABOUT THE AUTHOR

...view details