ಕರ್ನಾಟಕ

karnataka

ETV Bharat / state

ಶಿಗ್ಗಾಂವಿಯಲ್ಲಿ SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ - ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಸುದ್ದಿ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

sslc-student-tested-corona-positive
SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ

By

Published : Jun 21, 2020, 10:28 AM IST

ಹಾವೇರಿ:ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಗೌಡರ ಓಣಿ‌ ನಿವಾಸಿ ಆಗಿರೋ ಎಸ್ಎಸ್ಎಲ್​​ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ
15 ವರ್ಷದ ಈ ವಿದ್ಯಾರ್ಥಿನಿ (P-8644) ತಂದೆ, ತಾಯಿಯೊಂದಿಗೆ ವಾಸವಾಗಿದ್ದಳು. 46 ವರ್ಷದ P-6832 ಸಂಪರ್ಕದಿಂದ ವಿದ್ಯಾರ್ಥಿನಿಗೆ ಸೋಂಕು ತಗುಲಿದೆ. ಸೋಂಕಿತೆ ಕಂಟೈನ್ಮೆಂಟ್ ಪ್ರದೇಶದಲ್ಲಿದ್ದು, ಜೂನ್ 17ರಂದು ಆರೋಗ್ಯ ಇಲಾಖೆ ವಿದ್ಯಾರ್ಥಿನಿಯ ಸ್ವ್ಯಾಬ್ ಅನ್ನು ಲ್ಯಾಬ್​​ಗೆ ಕಳಿಸಿದ್ದು, ವರದಿ ಪಾಸಿಟಿವ್​ ಬಂದಿದೆ. ಈ ಹಿನ್ನೆಲೆ ಸೋಂಕಿತ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ABOUT THE AUTHOR

...view details