ಕರ್ನಾಟಕ

karnataka

By

Published : May 26, 2021, 7:11 AM IST

ETV Bharat / state

ಸಾವಿನ ಸಂಖ್ಯೆ ಹೆಚ್ಚಾಗಲು ಜನರ ನಿರ್ಲಕ್ಷ್ಯವೇ ಕಾರಣ: ಬಿ.ಸಿ.ಪಾಟೀಲ್

ಜನರು ಸ್ವಲ್ಪ ಪ್ರಮಾಣದ ರೋಗ ಲಕ್ಷಣಗಳಿದ್ದಾಗ ಸರ್ಕಾರಿ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪಾಸಿಟಿವ್ ಅಂದರೆ ಅದು ಅಪರಾಧ ಎನ್ನುವ ರೀತಿ ಹೆದರುತ್ತಿದ್ದಾರೆ. ಕೊರೊನಾ ಒಂದು ವೈರಾಣುವಿನಿಂದ ಬರುವ ಖಾಯಿಲೆಯಾಗಿದ್ದು ಹೆದರಬಾರದು. ಆದಷ್ಟು ಜನ ಸೇರುವ ಕಾರ್ಯಕ್ರಮಗಳಿಂದ ದೂರವಿರಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ
ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ಅಧಿಕವಾಗಲು ಜನರ ನಿರ್ಲಕ್ಷ್ಯವೇ ಕಾರಣ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಜನರು ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಾರೆ. ರೋಗ ತೀವ್ರತೆ ಪಡೆದು ಆಮ್ಲಜನಕ ಪ್ರಮಾಣ ಕುಸಿಯುತ್ತಿದ್ದಂತೆ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇನ್ನೊಂದು ಕಡೆ ಮನೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಹೋಂ ಐಸೋಲೇಷನ್‌ ಮಾಡಲಾಗುತ್ತಿದೆ. ಇದು ಸಹ ಸಾವಿನ ಸಂಖ್ಯೆ ಅಧಿಕವಾಗಲು ಕಾರಣ ಎಂದರು.

ABOUT THE AUTHOR

...view details