ಹಾವೇರಿ:ಜಿಲ್ಲೆಯಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆಯ ಪರಿಣಾಮ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ಮೂವರು ಶಾಲಾ ವಿದ್ಯಾರ್ಥಿನಿಯರು ಸುದೈವವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ವಿದ್ಯಾರ್ಥಿನಿಯರು! - ಹಾವೇರಿಯಲ್ಲಿ ಧಾರಾಕಾರ ಮಳೆ
ಹಾವೇರಿಯಲ್ಲಿ ಧಾರಾಕಾರ ಮಳೆಯ ಕಾರಣ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ಮೂವರು ವಿದ್ಯಾರ್ಥಿನಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾನಗಲ್ ರಸ್ತೆಯಲ್ಲಿರೋ ಸರಸ್ವತಿ ಚಿತ್ರಮಂದಿರದ ಕ್ರಾಸ್ ಬಳಿ ವಿದ್ಯಾರ್ಥಿನಿಯರು ಕಾಲು ಜಾರಿ ಚರಂಡಿಗೆ ಬಿದ್ದು ಒದ್ದಾಡ್ತಿರೋದನ್ನ ಗಮನಿಸಿದ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.
ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗ್ತಿದ್ದು, ರಸ್ತೆ, ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದವು. ಆಗ ವಿದ್ಯಾರ್ಥಿನಿಯರು ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಜಾರಿ ಬಿದ್ದಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾದ ವಿದ್ಯಾರ್ಥಿನಿಯರು ಬದುಕಿದೆಯಾ ಬಡಜೀವವೇ.. ಎಂದು ನಿಟ್ಟುಸಿರು ಬಿಟ್ಟಿದ್ದಾರೆ.