ಹಾವೇರಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಎಕರೆ ಕಬ್ಬು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ತಾಲೂಕಿನ ತಿಮ್ಮಾಪುರ ಎಂ.ಎ ಗ್ರಾಮದಲ್ಲಿ ನಡೆದಿದೆ.
ಹಾವೇರಿ: ಆಕಸ್ಮಿಕ ಬೆಂಕಿಗೆ 3 ಎಕರೆ ಕಬ್ಬು ಅಗ್ನಿಗಾಹುತಿ - ಹಾವೇರಿಯಲ್ಲಿ ಕಬ್ಬಿಗೆ ತಗುಲಿದ ಆಕಸ್ಮಿಕ ಬೆಂಕಿ
ಆಕಸ್ಮಿಕ ಬೆಂಕಿ ತಗುಲಿ ಮೂರು ಎಕರೆ ಕಬ್ಬು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ತಾಲೂಕಿನ ತಿಮ್ಮಾಪುರ ಎಂ.ಎ ಗ್ರಾಮದಲ್ಲಿ ನಡೆದಿದೆ.

ಕಬ್ಬು ಅಗ್ನಿಗಾಹುತಿ
ಕಬ್ಬು ಅಗ್ನಿಗಾಹುತಿ
ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ. ವೀರಭದ್ರಪ್ಪ, ಬಸವರಾಜ ಮತ್ತು ಮಂಜುನಾಥ ಎಂಬ ರೈತರಿಗೆ ಸೇರಿದ ಜಮೀನನಲ್ಲಿ ಕಬ್ಬು ಬೆಳೆಯಲಾಗಿತ್ತು. ಘಟನೆಯಿಂದಾಗಿ ಮೂರು ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು ಯಾವುದೇ ಪ್ರಯೋಜನವಾಗಿಲ್ಲ.ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.