ಹಾವೇರಿ: ಸಂಶಯಾಸ್ಪದ ರೀತಿಯಲ್ಲಿ ಚಿರತೆಯ ಶವ ಪತ್ತೆಯಾದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದ ಬಳಿ ನಡೆದಿದೆ.
ರಟ್ಟೀಹಳ್ಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಚಿರತೆಯ ಶವ ಪತ್ತೆ - ರಟ್ಟೀಹಳ್ಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಚಿರತೆಯ ಶವ ಪತ್ತೆ
ಸಂಶಯಾಸ್ಪದ ರೀತಿಯಲ್ಲಿ ಚಿರತೆಯ ಶವ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಟ್ಟೀಹಳ್ಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಚಿರತೆಯ ಶವ ಪತ್ತೆ
ಗ್ರಾಮದ ತುಂಗಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆ ಬಳಿ ಶವ ಪತ್ತೆಯಾಗಿದೆ. ಚಿರತೆ ಮೃತದೇಹದ ಮೇಲೆ ಕಾಣಿಸಿರುವ ಸ್ವಲ್ಪ ಪ್ರಮಾಣದ ರಕ್ತದ ಕಲೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.