ಹಾವೇರಿ : ಹೆದ್ದಾರಿ ಬದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಹಾವೇರಿ ತಾಲೂಕು ಸೋಮನಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನ್ನು ಹಡಗಲಿ ಮೂಲದ ನವೀನ ರಾಥೋಡ್ (27) ಎಂದು ಗುರುತಿಸಲಾಗಿದೆ. ಮೊಳಕಾಲ್ಮೂರು ಮತ್ತು ಶಿರಸಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ನವೀನ್ ನ ಶವ ಪತ್ತೆಯಾಗಿದ್ದು, ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ.
ದುಷ್ಕರ್ಮಿಗಳು ನವೀನ್ ಮೇಲೆ ಹಲ್ಲೆ ಮಾಡಿ ಕುತ್ತಿಗೆ ಬಿಗಿದು ಕೊಲೆ ಮಾಡಿ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನವೀನ್ ಕುಡಿತ, ಗಾಂಜಾ ಸೇರಿದಂತೆ ವಿವಿಧ ಚಟಗಳಿಗೆ ದಾಸನಾಗಿದ್ದ. ಅಲ್ಲದೆ ಕಳ್ಳತನದಲ್ಲಿ ತೊಡಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎಸ್ಪಿ ಹನುಮಂತರಾಯ ಹಾಗೂ ಎಎಸ್ಪಿ ವಿಜಯಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.