ಹಾವೇರಿ: ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ ನಡೆಸಿ ಕಬ್ಬಿಣದ ತೆಪ್ಪಗಳನ್ನು ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ - illegal sand mafia
ಹಾವೇರಿ ಜಿಲ್ಲೆಯ ತಹಶೀಲ್ದಾರ್ ಜಿ.ಶಂಕರ್ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿ 6 ಕಬ್ಬಿಣದ ತೆಪ್ಪಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ
ತಹಶೀಲ್ದಾರ್ ಜಿ.ಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ ಸುಮಾರು 2 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಆರು ಕಬ್ಬಿಣದ ತೆಪ್ಪಗಳನ್ನು ವಶಪಡಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಇದ್ದರು.